Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:16 - ಕನ್ನಡ ಸತ್ಯವೇದವು J.V. (BSI)

16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:16
7 ತಿಳಿವುಗಳ ಹೋಲಿಕೆ  

ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರಭಾರಿಗಳನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ ಅಂತಃಪುರಪಾಲಕನೂ ರಾಜ ಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ; ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಆಕೆಯ ವಿಷಯವಾದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿರಲು


ಎಜ್ರನು ಆ ಅರಸನ ಆಳಿಕೆಯ ಏಳನೆಯ ವರುಷದಲ್ಲಿ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ಮುಟ್ಟಿದನು.


ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.


ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು