Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:20 - ಕನ್ನಡ ಸತ್ಯವೇದವು J.V. (BSI)

20 ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಈಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬದನ್ನು ತೋರ್ಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೊರ್ದೆಕೈ ಎಸ್ತೇರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲಿ ತನ್ನ ಕುಟುಂಬದ ಹಿನ್ನಲೆಯ ಬಗ್ಗೆಯಾಗಲಿ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊರ್ದೆಕೈ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:20
3 ತಿಳಿವುಗಳ ಹೋಲಿಕೆ  

ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.


ಇವನು ಎಸ್ತೇರಳೆಂಬ ಹೆಸರನ್ನು ಪಡೆದ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆ ತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಈಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು