Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:21 - ಕನ್ನಡ ಸತ್ಯವೇದವು J.V. (BSI)

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:21
13 ತಿಳಿವುಗಳ ಹೋಲಿಕೆ  

ಅಹಷ್ವೇರೋಷ್ ರಾಜನನ್ನು ಕೊಲ್ಲಬೇಕೆಂದು ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಒಳಸಂಚುಮಾಡಿದ ಸಂಗತಿಯೂ ಅದು ಮೊರ್ದೆಕೈಯ ಮುಖಾಂತರ ಬೈಲಿಗೆ ಬಂದ ಸಂಗತಿಯೂ ಅದರಲ್ಲಿ ಸಿಕ್ಕಿದವು.


ಅರಸುಗಳಿಗೆ ಜಯಪ್ರದನೂ ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ಕನ್ಯೆಯರು ಎರಡನೆಯ ಸಾರಿ ಕೂಡಿಸಲ್ಪಡುತ್ತಿರುವಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಲಲ್ಲಿ ಕೂತುಕೊಂಡಿದ್ದನು.


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು