Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:22 - ಕನ್ನಡ ಸತ್ಯವೇದವು J.V. (BSI)

22 ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್‍ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ಸಂಗತಿಯು ಮೊರ್ದೆಕೈಗೆ ಗೊತ್ತಾದಾಗ ಅವನು ಅದನ್ನು ಎಸ್ತೇರ್ ರಾಣಿಗೆ ತಿಳಿಸಿದನು. ಆಕೆಯು ಅವನ ಹೆಸರನ್ನು ಅರಸನಿಗೆ ಹೇಳಿ ಆ ಸಂಗತಿಯನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ವಿಷಯ ಮೊರ್ದೆಕೈಗೆ ತಿಳಿದುಬಂದಾಗ, ಆತನು ಎಸ್ತೇರಳಿಗೆ ತಿಳಿಸಿದನು. ರಾಣಿಯು ಅವನ ಹೆಸರನ್ನು ಅರಸನಿಗೆ ಹೇಳಿ ಅವರು ನಡೆಸುತ್ತಿದ್ದ ಆ ಪಿತೂರಿ ಬಗ್ಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೊರ್ದೆಕೈಗೆ ಈ ವಿಷಯ ಗೊತ್ತಾದಾಗ ಅವನು ಅದನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:22
6 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಮನಸ್ಸಿನಲ್ಲಿಯೂ ರಾಜನನ್ನು ದೂಷಿಸದಿರು, ಮಲಗುವ ಮನೆಯಲ್ಲಿಯೂ ಧನಿಕನನ್ನು ಬಯ್ಯದಿರು; ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸೀತು; ಪಕ್ಷಿಯು ಆ ವಿಷಯವನ್ನು ತಿಳಿಸೀತು.


ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು