ಎಸ್ತೇರಳು 2:3 - ಕನ್ನಡ ಸತ್ಯವೇದವು J.V. (BSI)3 ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರಭಾರಿಗಳನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ ಅಂತಃಪುರಪಾಲಕನೂ ರಾಜ ಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ; ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಾಜನು ತನ್ನ ಸಾಮ್ರಾಜ್ಯದ ಪ್ರತಿಯೊಂದು ಪ್ರಾಂತ್ಯದಲ್ಲೂ ನಾಯಕರುಗಳನ್ನು ಆರಿಸಲಿ. ಆ ನಾಯಕರು ಅತ್ಯಂತ ರೂಪವತಿಯರಾದ ಕನ್ನಿಕೆಯರನ್ನು ಶೂಷನ್ ರಾಜಧಾನಿಗೆ ಕರೆದುಕೊಂಡು ಬಂದು ಅವರನ್ನು ರಾಜನ ಸ್ತ್ರೀಯರೊಡನೆ ಇರಿಸಲಿ. ಆ ಸ್ತ್ರೀಯರು ಮೇಲ್ವಿಚಾರಕನಾದ ರಾಜನ ಕಂಚುಕಿ ಹೇಗೈಯ ಪರಿಪಾಲನೆಯಲ್ಲಿರಲಿ. ಬಳಿಕ ಅವರಿಗೆ ಸೌಂದರ್ಯವರ್ಧಕ ಚಿಕಿತ್ಸೆ ಕೊಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ. ಅಧ್ಯಾಯವನ್ನು ನೋಡಿ |