ಎಸ್ತೇರಳು 2:5 - ಕನ್ನಡ ಸತ್ಯವೇದವು J.V. (BSI)5 ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು. ಅಧ್ಯಾಯವನ್ನು ನೋಡಿ |