ಎಸ್ತೇರಳು 2:9 - ಕನ್ನಡ ಸತ್ಯವೇದವು J.V. (BSI)9 ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು. ಅಧ್ಯಾಯವನ್ನು ನೋಡಿ |