Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:10 - ಕನ್ನಡ ಸತ್ಯವೇದವು J.V. (BSI)

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:10
7 ತಿಳಿವುಗಳ ಹೋಲಿಕೆ  

ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.


ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ


ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.


ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.


ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು