Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:11 - ಕನ್ನಡ ಸತ್ಯವೇದವು J.V. (BSI)

11 ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅರಸನು ಹಾಮಾನನಿಗೆ, “ನಿನ್ನ ಹಣವು ನಿನ್ನ ಹತ್ರವೇ ಇರಲಿ. ಆ ಜನರನ್ನು ನಿನಗೆ ಇಷ್ಟಬಂದ ಹಾಗೆ ಮಾಡಬಹುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:11
6 ತಿಳಿವುಗಳ ಹೋಲಿಕೆ  

ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವದನ್ನು ನನಗೆ ಮಾಡಿರಿ.


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿ ಅವನಿಗೆ -


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು