ಎಸ್ತೇರಳು 3:12 - ಕನ್ನಡ ಸತ್ಯವೇದವು J.V. (BSI)12 ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿ |