ಎಸ್ತೇರಳು 3:14 - ಕನ್ನಡ ಸತ್ಯವೇದವು J.V. (BSI)14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿಯೂ ಪ್ರಕಟಿಸಲ್ಪಡಬೇಕು ಎಂದೂ ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರ ಆಸ್ತಿಯನ್ನು ಕೊಳ್ಳೆಹೊಡೆಯಿರಿ. ಎಲ್ಲರೂ ಆ ದಿನಕ್ಕೆ ಸಿದ್ಧರಾಗಿರುವಂತೆ ಈ ಪತ್ರದ ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲೂ ರಾಜಾಜ್ಞೆಯಂತೆ ಪ್ರಕಟವಾಗಲಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು. ಅಧ್ಯಾಯವನ್ನು ನೋಡಿ |