ಎಸ್ತೇರಳು 3:2 - ಕನ್ನಡ ಸತ್ಯವೇದವು J.V. (BSI)2 ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು. ಅಧ್ಯಾಯವನ್ನು ನೋಡಿ |