Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:5 - ಕನ್ನಡ ಸತ್ಯವೇದವು J.V. (BSI)

5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುವದಿಲ್ಲವೆಂದು ಹಾಮಾನನು ನೋಡಿ ಬಹು ಕೋಪವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:5
13 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು.


ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.


ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.


ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುವನು.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು.


ದಿನಂಪ್ರತಿ ಅವನನ್ನು ಎಚ್ಚರಿಸಿದರೂ ಅವನು ಮಣಿಯಲಿಲ್ಲ. ಆದದರಿಂದ ಅವರು - ತಾನು ಯೆಹೂದ್ಯನೆನ್ನುವ ಮೊರ್ದೆಕೈಯ ಹೆಮ್ಮೆಯ ಹಟವು ಸಾಗುವದೇನೋ ನೋಡೋಣ ಎಂದುಕೊಂಡು ಅದನ್ನು ಹಾಮಾನನಿಗೆ ತಿಳಿಸಿದರು.


ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು.


ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು