Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:7 - ಕನ್ನಡ ಸತ್ಯವೇದವು J.V. (BSI)

7 ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:7
13 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರುಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ಪ್ರತಿವರುಷವೂ ಫಾಲ್ಗುನಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವದು ಶಾಶ್ವತನಿಯಮ ಎಂದೆಣಿಸಬೇಕು.


ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು.


ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಪಾಲ್ಗುನಮಾಸದ ಹದಿಮೂರನೆಯ ದಿನವು ಬಂತು. ಆ ದಿವಸದಲ್ಲಿ ಯೆಹೂದ್ಯರನ್ನು ಸ್ವಾಧೀನಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ಹಗೆಗಳನ್ನು ಸ್ವಾಧೀನ ಮಾಡಿಕೊಂಡರು.


ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.


ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.


ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು