ಎಸ್ತೇರಳು 4:2 - ಕನ್ನಡ ಸತ್ಯವೇದವು J.V. (BSI)2 ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದೇ ಸ್ಥಿತಿಯಲ್ಲಿ ಅರಮನೆಯ ಹೆಬ್ಬಾಗಿಲವರೆಗೂ ಬಂದನು. ಗೋಣಿತಟ್ಟನ್ನು ಉಟ್ಟವರು ಯಾರೂ ಒಳಗೆ ಪ್ರವೇಶಿಸಕೂಡದೆಂಬ ನಿಷೇಧಾಜ್ಞೆ ಜಾರಿಯಲ್ಲಿ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ್ದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು.