Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:3 - ಕನ್ನಡ ಸತ್ಯವೇದವು J.V. (BSI)

3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:3
20 ತಿಳಿವುಗಳ ಹೋಲಿಕೆ  

ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.


ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಅಧರ್ಮಿಗಳನ್ನೂ ಕೂಡಿಸಿ ಬೆಂಕೀಕೊಂಡದಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಲು ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು.


ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.


ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ - ಯೆಹೂದ್ಯರು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ಉಪವಾಸಪ್ರಲಾಪ ದಿನಗಳನ್ನು ಪ್ರತಿವರುಷ ತಪ್ಪದೆ ಆಚರಿಸಬೇಕೆಂದು ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರುಷ ತಪ್ಪದೆ ನೇವಿುತವಾದ ಕಾಲದಲ್ಲಿ ಆಚರಿಸಬೇಕು ಎಂದು ಬರೆದಿದ್ದಳು.


ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.


ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕೂತುಕೊಂಡಿದ್ದನು.


ನಿನ್ನ ನಿವಿುತ್ತ ದನಿಗೈದು ದುಃಖದಿಂದರಚಿ ತಲೆಗೆ ದೂಳೆರಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು