Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:4 - ಕನ್ನಡ ಸತ್ಯವೇದವು J.V. (BSI)

4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಗಳನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದುಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಗಳನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:4
10 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು.


ಯೆಹೋವನು ಇಂತೆನ್ನುತ್ತಾನೆ - ರಾಮದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಘೋರರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆಹೋದದ್ದಕ್ಕಾಗಿ ಸಮಾಧಾನಹೊಂದಲೊಲ್ಲದೆ ಇದ್ದಾಳೆ.


ಯೆಹೋವನನ್ನು ಅವಲಂಬಿಸಿದ ವಿದೇಶೀಯನು - ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು ಎಂದು ಮಾತಾಡದಿರಲಿ; ಮತ್ತು ನಪುಂಸಕನು - ಅಯ್ಯೋ, ನಾನು ಗೊಡ್ಡುಮರ ಎಂದು ಅಂದುಕೊಳ್ಳದಿರಲಿ.


ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ನಿಮ್ಮ ಧಾನ್ಯದ್ರಾಕ್ಷೆಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ ಪರಿವಾರದವರಿಗೂ ಕೊಡುವನು.


ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.


ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು