ಎಸ್ತೇರಳು 4:5 - ಕನ್ನಡ ಸತ್ಯವೇದವು J.V. (BSI)5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು. ಅಧ್ಯಾಯವನ್ನು ನೋಡಿ |