Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:6 - ಕನ್ನಡ ಸತ್ಯವೇದವು J.V. (BSI)

6 ಹತಾಕನು ಅರಮನೆಯ ಬಾಗಲಿನ ಮುಂದಿರುವ ಪಟ್ಟಣದ ಬೈಲಿಗೆ ಮೊರ್ದೆಕೈಯ ಹತ್ತಿರ ಹೋದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅರಮನೆಯ ಹೆಬ್ಬಾಗಿಲು ಎದುರಿನಲ್ಲಿದ್ದ ಬಯಲಿನಲ್ಲಿ ಮೊರ್ದೆಕೈಯನ್ನು ಹತಾಕನು ಸಂಧಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:6
5 ತಿಳಿವುಗಳ ಹೋಲಿಕೆ  

ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು.


ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.


ಮೊರ್ದೆಕೈಯು ತನಗೆ ಸಂಭವಿಸಿದದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ಅಪ್ಪಣೆಪಡಕೊಳ್ಳುವದಕ್ಕಾಗಿ ರಾಜಭಂಡಾರಕ್ಕೆ ತೂಕಮಾಡಿ ಕೊಡುತ್ತೇನೆಂದು ವಾಗ್ದಾನಮಾಡಿದ ಸರಿಯಾದ ಹಣದ ಗಂಟು ಇಷ್ಟೆಂಬದನ್ನೂ ಅವನಿಗೆ ತಿಳಿಸಿದ್ದಲ್ಲದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು