ಎಸ್ತೇರಳು 4:7 - ಕನ್ನಡ ಸತ್ಯವೇದವು J.V. (BSI)7 ಮೊರ್ದೆಕೈಯು ತನಗೆ ಸಂಭವಿಸಿದದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ಅಪ್ಪಣೆಪಡಕೊಳ್ಳುವದಕ್ಕಾಗಿ ರಾಜಭಂಡಾರಕ್ಕೆ ತೂಕಮಾಡಿ ಕೊಡುತ್ತೇನೆಂದು ವಾಗ್ದಾನಮಾಡಿದ ಸರಿಯಾದ ಹಣದ ಗಂಟು ಇಷ್ಟೆಂಬದನ್ನೂ ಅವನಿಗೆ ತಿಳಿಸಿದ್ದಲ್ಲದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು, ನಡೆದ ಎಲ್ಲಾ ವಿಷಯಗಳನ್ನು ಮತ್ತು ಯೆಹೂದ್ಯರನ್ನು ನಾಶಮಾಡಲು ಅನುಮತಿ ಪಡೆದುಕೊಳ್ಳುವುದಕ್ಕಾಗಿ ಹಾಮಾನನು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿದ ನಿಗದಿತ ಹಣದ ವಿಷಯವನ್ನು ಅವನಿಗೆ ವಿವರಿಸಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿ |