ಎಸ್ತೇರಳು 5:12 - ಕನ್ನಡ ಸತ್ಯವೇದವು J.V. (BSI)12 ಅಹಹ! ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನನ್ನು ಹೊರತಾಗಿ ಇನ್ನಾರನ್ನೂ ಕರಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ. ಅಧ್ಯಾಯವನ್ನು ನೋಡಿ |