ಎಸ್ತೇರಳು 5:14 - ಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿ |