Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:2 - ಕನ್ನಡ ಸತ್ಯವೇದವು J.V. (BSI)

2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:2
9 ತಿಳಿವುಗಳ ಹೋಲಿಕೆ  

ಅರಸನು ಸುವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತು ಅವನಿಗೆ -


ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವವನು.


ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು