Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:6 - ಕನ್ನಡ ಸತ್ಯವೇದವು J.V. (BSI)

6 ದ್ರಾಕ್ಷಾರಸಪಾನ ಮಾಡುವಾಗ ಅರಸನು ತಿರಿಗಿ ಎಸ್ತೇರಳಿಗೆ - ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಅನ್ನಲು ಎಸ್ತೇರಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ದ್ರಾಕ್ಷಾರಸವನ್ನು ಸೇವಿಸುತ್ತಿರುವಾಗ ರಾಜನು ಎಸ್ತೇರಳನ್ನು ತಿರಿಗಿ ವಿಚಾರಿಸಿದನು, “ನೀನು ನನ್ನನ್ನು ಏನು ಕೇಳಬೇಕೆಂದಿದ್ದೀ? ಏನೂ ಬೇಕಾದರೂ ಕೇಳು. ನಾನು ಕೊಡುತ್ತೇನೆ. ಹೇಳು ಏನುಬೇಕು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಾನು ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:6
6 ತಿಳಿವುಗಳ ಹೋಲಿಕೆ  

ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು.


ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು.


ನೀನು ನನ್ನನ್ನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧ ರಾಜ್ಯವನ್ನು ಕೇಳಿದರೂ, ನಿನಗೆ ಕೊಡುತ್ತೇನೆ ಎಂದು ಆಣೆಯಿಟ್ಟುಕೊಂಡು ಹೇಳಿದನು.


ಅರಸರು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಕೇಳುವದನ್ನು ಕೊಡುವದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವದಕ್ಕೂ ಮನಸ್ಸುಳ್ಳವರಾಗಿದ್ದರೆ


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು