ಎಸ್ತೇರಳು 6:11 - ಕನ್ನಡ ಸತ್ಯವೇದವು J.V. (BSI)11 ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು. ಅಧ್ಯಾಯವನ್ನು ನೋಡಿ |