Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:9 - ಕನ್ನಡ ಸತ್ಯವೇದವು J.V. (BSI)

9 ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಧಾರಣೆಮಾಡಿಸಿ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸುತ್ತಾ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆಮಾಡಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನರಲ್ಲಿ ಒಬ್ಬನ ವಶಕ್ಕೆ ಕೊಡಬೇಕು. ಇವನು ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿದ ತರುವಾಯ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!’ ಎಂದು ಪ್ರಕಟಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:9
5 ತಿಳಿವುಗಳ ಹೋಲಿಕೆ  

ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಹಾಮಾನನು ಬಂದಾಗ - ಅರಸನು ಯಾವನನ್ನು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿರುತ್ತಾನೋ ಅಂಥವನಿಗೆ ಮಾಡತಕ್ಕದ್ದೇನು ಎಂದು ಅವನನ್ನು ಕೇಳಿದನು. ಹಾಮಾನನು - ಅರಸನು ನನ್ನನ್ನಲ್ಲದೆ ಇನ್ನಾರನ್ನು ಸನ್ಮಾನಿಸುವದಕ್ಕೆ ಇಷ್ಟವುಳ್ಳವನಾಗಿರುವನು ಅಂದುಕೊಂಡು


ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು