ಎಸ್ತೇರಳು 7:10 - ಕನ್ನಡ ಸತ್ಯವೇದವು J.V. (BSI)10 ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.