ಎಸ್ತೇರಳು 7:3 - ಕನ್ನಡ ಸತ್ಯವೇದವು J.V. (BSI)3 ಆಗ ಎಸ್ತೇರ್‍ರಾಣಿಯು - ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವದಾದರೆ ನನ್ನ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಜನಾಂಗವನ್ನೂ ಉಳಿಯಗೊಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಎಸ್ತೇರ್ ರಾಣಿಯು, “ರಾಜನೇ, ನೀನು ನನ್ನನ್ನು ಮೆಚ್ಚಿ ಪ್ರೀತಿಸುವದಾದರೆ ದಯಮಾಡಿ ನಾನು ಬದುಕುವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ. ಅಧ್ಯಾಯವನ್ನು ನೋಡಿ |