Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:5 - ಕನ್ನಡ ಸತ್ಯವೇದವು J.V. (BSI)

5 ಅಹಷ್ವೇರೋಷ್‍ರಾಜನು ಎಸ್ತೇರ್‍ರಾಣಿಯನ್ನು - ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ರಾಜನು ಎಸ್ತೇರಳಿಗೆ, “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:5
5 ತಿಳಿವುಗಳ ಹೋಲಿಕೆ  

ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.


ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.


ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು