Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:8 - ಕನ್ನಡ ಸತ್ಯವೇದವು J.V. (BSI)

8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:8
9 ತಿಳಿವುಗಳ ಹೋಲಿಕೆ  

ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.


ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ


ಇಗೋ, ಬಲಿತವನೇ, ಯೆಹೋವನು ನಿನ್ನನ್ನು ಎಸೆದೇ ಎಸೆಯುವನು, ಹಿಡಿದೇ ಹಿಡಿಯುವನು;


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.


ಈ ದಿನಗಳಾದನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಕನಿಷ್ಠರಿಗೂ ಅರಮನೆಯ ತೋಟದ ಬೈಲಿನಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು