ಎಸ್ತೇರಳು 8:1 - ಕನ್ನಡ ಸತ್ಯವೇದವು J.V. (BSI)1 ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್‍ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದ್ದರಿಂದ ಅರಸನು ಮೊರ್ದೆಕೈಯನ್ನು ಒಡ್ಡೋಲಗದಲ್ಲಿ ಸೇರಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅದೇ ದಿವಸದಲ್ಲಿ ರಾಜ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಆಸ್ತಿಪಾಸ್ತಿಗಳನ್ನೆಲ್ಲಾ ರಾಣಿ ಎಸ್ತೇರಳಿಗೆ ಕೊಟ್ಟನು. ಎಸ್ತೇರ್ ರಾಣಿಯು ಅರಸನಿಗೆ, “ಮೊರ್ದೆಕೈ ತನ್ನ ಸೋದರಣ್ಣನಾಗ ಬೇಕು” ಎಂದಳು. ನಂತರ ಮೊರ್ದೆಕೈಯು ಅರಸನನ್ನು ಕಾಣಲು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು. ಅಧ್ಯಾಯವನ್ನು ನೋಡಿ |