Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:14 - ಕನ್ನಡ ಸತ್ಯವೇದವು J.V. (BSI)

14 ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:14
13 ತಿಳಿವುಗಳ ಹೋಲಿಕೆ  

ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರಭಾರಿಗಳನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ ಅಂತಃಪುರಪಾಲಕನೂ ರಾಜ ಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ; ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ಅಹಷ್ವೇರೋಷನು ತನ್ನ ಆಳಿಕೆಯ ಮೂರನೆಯ ವರುಷ ಶೂಷನ್ ಕೋಟೆಯಲ್ಲಿನ ತನ್ನ ರಾಜಸಿಂಹಾಸನವನ್ನೇರಿದಾಗ


ಹಕಲ್ಯನ ಮಗನಾದ ನೆಹೆಮೀಯನ ಮಾತುಗಳು - ಇಪ್ಪತ್ತನೆಯ ವರುಷದ ಮಾರ್ಗಶೀರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ


ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು -


ಇದಲ್ಲದೆ ಅವರು ರಥಾಶ್ವಗಳಿಗೋಸ್ಕರವೂ ಸವಾರಿಕುದುರೆಗಳಿಗೋಸ್ಕರವೂ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದೊಪ್ಪಿಸುತ್ತಿದ್ದರು.


ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ


ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿಯೂ ಪ್ರಕಟಿಸಲ್ಪಡಬೇಕು ಎಂದೂ ಬರೆದಿತ್ತು.


ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕೆಂದೂ ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವದಕ್ಕೆ ಸಿದ್ಧರಾಗಿರಬೇಕೆಂದೂ ಅಪ್ಪಣೆಮಾಡಿದನು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು