Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:5 - ಕನ್ನಡ ಸತ್ಯವೇದವು J.V. (BSI)

5 ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನನ್ನನ್ನು ಮೆಚ್ಚಿ ನಾನು ಹೇಳುವ ಮಾತು ಉಚಿತವಾದದ್ದೆಂದೆಣಿಸಿ ಅದಕ್ಕೆ ಸಮ್ಮತಿಸುವದಾದರೆ ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವದರ ವಿಷಯವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರಿಸಿದ ಪತ್ರಗಳನ್ನು ರದ್ದುಮಾಡುವದಕ್ಕಾಗಿ ರಾಯಸವನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:5
9 ತಿಳಿವುಗಳ ಹೋಲಿಕೆ  

ಆಗ ಎಸ್ತೇರ್‍ರಾಣಿಯು - ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವದಾದರೆ ನನ್ನ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಜನಾಂಗವನ್ನೂ ಉಳಿಯಗೊಡಿಸಬೇಕು.


ನಾನು ತಮಗೋಸ್ಕರ ಸಿದ್ಧಮಾಡಿಸುವ ಔತಣಕ್ಕೆ ನಾಳೆಯೂ ಹಾಮಾನನ ಜೊತೆಯಲ್ಲಿ ಬರೋಣವಾಗಲಿ; ಆಗ ಅರಸರು ಹೇಳಿದಂತೆ ಮಾಡುವೆನು. ಇದೇ ನನ್ನ ಮನವಿ ಎಂದು ಉತ್ತರಕೊಟ್ಟಳು.


ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು


ಮತ್ತು ಅರಸನಿಗೆ ಇಷ್ಟಳಾಗಿ ಕಾಣುವ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಎಂದು ಹೇಳಿದರು. ಅರಸನು ಈ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು.


ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು.


ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು