Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:7 - ಕನ್ನಡ ಸತ್ಯವೇದವು J.V. (BSI)

7 ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕೈಯೆತ್ತಿದದರಿಂದ ಅವನನ್ನು ಗಲ್ಲಿಗೆ ಹಾಕಿಸಿ ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:7
7 ತಿಳಿವುಗಳ ಹೋಲಿಕೆ  

ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ; ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.


ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್‍ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದ್ದರಿಂದ ಅರಸನು ಮೊರ್ದೆಕೈಯನ್ನು ಒಡ್ಡೋಲಗದಲ್ಲಿ ಸೇರಿಸಿ


ಇದಲ್ಲದೆ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು - ಇಗೋ ಈ ಹಾಮಾನನ ಮನೆಯ ಹತ್ತಿರ ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಇವನಿಂದ ಸಿದ್ಧಮಾಡಲ್ಪಟ್ಟ ಐವತ್ತು ಮೊಳ ಎತ್ತರವಾದ ಗಲ್ಲು ಮರವಿರುತ್ತದಲ್ಲಾ ಅನ್ನಲು ಅರಸನು - ಇವನನ್ನು ಅದಕ್ಕೆ ನೇತುಹಾಕಿರಿ ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು