ಎಸ್ತೇರಳು 9:16 - ಕನ್ನಡ ಸತ್ಯವೇದವು J.V. (BSI)16 ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ ಪ್ರಾಣರಕ್ಷಿಸಿಕೊಳ್ಳುವದಕ್ಕಾಗಿ ಕೂಡಿಕೊಂಡು ಎದ್ದು ತಮ್ಮ ಹಗೆಗಳಲ್ಲಿ ಎಪ್ಪತ್ತೈದುಸಾವಿರ ಮಂದಿಯನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವದಕ್ಕೆ ಕೈ ಹಾಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |