Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:2 - ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅರಸನಾದ ಅಹಷ್ವೇರೋಷನ ಸಮಸ್ತಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡುಬಯಸಿದವರಿಗೆ ವಿರೋಧವಾಗಿ ಕೈಯೆತ್ತುವದಕ್ಕೆ ಕೂಡಿಕೊಂಡಾಗ ಯಾರೂ ಅವರೆದುರಿನಲ್ಲಿ ನಿಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅರಸನಾದ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಯಸಿದವರಿಗೆ ವಿರುದ್ಧವಾಗಿ ಕೈಯೆತ್ತುವುದಕ್ಕೆ ಸೇರಿಕೊಂಡಾಗ ಯಾರಿಗೂ ಅವರ ಎದುರಿನಲ್ಲಿ ನಿಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:2
12 ತಿಳಿವುಗಳ ಹೋಲಿಕೆ  

ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಆ ಪತ್ರಗಳಿಂದ ಅರಸನು - ಅಹಷ್ವೇರೋಷ್‍ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ


ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವದು.


ನನ್ನ ಪ್ರಾಣಕ್ಕೆ ಕಂಟಕರಾದವರು ಆಶಾಭಂಗಪಟ್ಟು ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದಾಪಮಾನಗಳು ಕವಿಯಲಿ.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ನೀವು ಹೋಗುವ ಎಲ್ಲಾ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ ಕಳವಳವನ್ನು ಉಂಟು ಮಾಡಿ ನಿಮ್ಮನ್ನು ವಿರೋಧಿಸುವವರನ್ನು ಓಡಿಹೋಗುವಂತೆ ಮಾಡುವೆನು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು