ಎಸ್ತೇರಳು 9:24 - ಕನ್ನಡ ಸತ್ಯವೇದವು J.V. (BSI)24 ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳು ಮಾಡುವದರ ವಿಷಯವಾಗಿ ಪೂರನ್ನು ಅಂದರೆ ಚೀಟನ್ನು ಹಾಕಿಸಿದನಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೆಹೂದ್ಯರೆಲ್ಲರ ಕಡುವೈರಿಯಾಗಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರನ್ನು ಅಂದರೆ ಚೀಟನ್ನು ಹಾಕಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು “ಪೂರೀಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು. ಅಧ್ಯಾಯವನ್ನು ನೋಡಿ |