Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:25 - ಕನ್ನಡ ಸತ್ಯವೇದವು J.V. (BSI)

25 (ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:25
19 ತಿಳಿವುಗಳ ಹೋಲಿಕೆ  

ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದು ಹೋಗಲಿ; ಆಗಲೇ ನಾನು ತಪ್ಪಿಸಿಕೊಳ್ಳುವೆನು.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;


ಅಹಷ್ವೇರೋಷ್‍ರಾಜನು ಎಸ್ತೇರ್‍ರಾಣಿಯನ್ನು - ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ ಎಂದು ಕೇಳಲು


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವದು ಸಾಲದೆಂದೆಣಿಸಿ ಇವನು ಯೆಹೂದಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಗಳನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ ನಾನು ಆತನನ್ನು ಕೊಂಡಾಡುವೆನು. ಪರಾತ್ಪರದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವದು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು