Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:26 - ಕನ್ನಡ ಸತ್ಯವೇದವು J.V. (BSI)

26 ಆ ಪೂರ್ ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ ಪೂರೀಮ್ ಎಂಬ ಹೆಸರಾಯಿತು. ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ “ಪೂರ್” ಎಂಬ ಶಬ್ದದ ಆಧಾರದಿಂದ ಆ ದಿನಗಳಿಗೆ “ಪೂರೀಮ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ‘ಪೂರ್’ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ‘ಪೂರಿಮ್’ ಎಂಬ ಹೆಸರು ಆಯಿತು. ಅರಸನು ಪತ್ರದಲ್ಲಿ ಬರೆದ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವೇ ಸ್ವತಃ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಚೀಟು ಹಾಕುವುದಕ್ಕೆ, “ಪೂರಿಮ್” ಎಂದು ಕರೆಯುತ್ತಿದ್ದುದರಿಂದ ಈ ಹಬ್ಬಕ್ಕೆ “ಪೂರಿಮ್” ಎಂದು ಹೆಸರಿಟ್ಟರು. ಮೊರ್ದೆಕೈ ಈ ಹಬ್ಬವನ್ನು ಆಚರಿಸಲು ಯೆಹೂದ್ಯರೆಲ್ಲರಿಗೆ ಪತ್ರದ ಮೂಲಕ ತಿಳಿಸಿದನು. ಅಂದಿನಿಂದ ಪ್ರತಿ ವರ್ಷ ಈ ಎರಡು ದಿನಗಳಲ್ಲಿ ಹಬ್ಬವನ್ನು ಆಚರಿಸುವ ಕ್ರಮವನ್ನು ಇಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:26
5 ತಿಳಿವುಗಳ ಹೋಲಿಕೆ  

ಮೊರ್ದೆಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು -


ಆ ದಿನದಲ್ಲಿ ನಾನು ಇಸ್ರಾಯೇಲಿನೊಳಗೆ ಲವಣ ಸಮುದ್ರದ ಮೂಡಣ ದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ತಗ್ಗನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ಗೋಗನ ಸಮೂಹದ ತಗ್ಗು ಅನ್ನಿಸಿಕೊಳ್ಳುವದು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ಎಸ್ತೇರಳ ಆ ನಿರೂಪವು ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಗ್ರಂಥದಲ್ಲಿ ಬರೆಯಲ್ಪಟ್ಟಿತು.


ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು