ಎಸ್ತೇರಳು 9:28 - ಕನ್ನಡ ಸತ್ಯವೇದವು J.V. (BSI)28 ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರಸಂಸ್ಥಾನ ನಗರಗಳವರು ಈ ದಿನಗಳನ್ನು ನೆನಪುಮಾಡಿಕೊಂಡು ಆಚರಿಸಬೇಕೆಂದೂ ಈ ಪೂರೀಮ್ ಹಬ್ಬವು ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು, ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರ್ಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿ |