ಓಬದ್ಯ 1:1 - ಕನ್ನಡ ಸತ್ಯವೇದವು J.V. (BSI)1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!” ಅಧ್ಯಾಯವನ್ನು ನೋಡಿ |