Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:12 - ಕನ್ನಡ ಸತ್ಯವೇದವು J.V. (BSI)

12 ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:12
27 ತಿಳಿವುಗಳ ಹೋಲಿಕೆ  

[ಯೆರೂಸಲೇಮು] ಹೊಲಸಾಗಿ ಹೋಗಲಿ, ಚೀಯೋನಿನ ನಾಶನವನ್ನು ಕಣ್ಣುತುಂಬಾ ನೋಡೋಣ ಅಂದುಕೊಳ್ಳುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿಬಂದಿವೆ.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ನನ್ನ ಎಲುಬುಗಳನ್ನೆಲ್ಲಾ ಎಣಿಸುವದಕ್ಕಾಗುವದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.


ನನ್ನನ್ನು ದ್ವೇಷಿಸುವವನಿಗೆ ಕೇಡುಬಂದಾಗ ಉಬ್ಬಿಕೊಂಡು ಅವನ ನಾಶನಕ್ಕೆ ಹಿಗ್ಗಿದೆನೋ?


ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;


ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರೋಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.


ನನ್ನ ದೇವರು ಪ್ರಸನ್ನನಾಗಿ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.


ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.


ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.


ಆದರೂ ನನಗೆ ಆಪತ್ತು ಬಂದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಅಕಾರಣವಾಗಿ ಈ ಭ್ರಷ್ಟರು ನನಗೆ ವಿರೋಧವಾಗಿ ಕೂಡಿಕೊಂಡು ಸೂರೆಮಾಡುವದನ್ನು ಬಿಡಲೇ ಇಲ್ಲ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.


ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋವಿುನವರೆಲ್ಲರನ್ನೂ ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದಿಂದುರಿಯುತ್ತಾ ಶಪಿಸೇ ಶಪಿಸಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು