ಓಬದ್ಯ 1:16 - ಕನ್ನಡ ಸತ್ಯವೇದವು J.V. (BSI)16 [ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು. ಅಧ್ಯಾಯವನ್ನು ನೋಡಿ |