Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:4 - ಕನ್ನಡ ಸತ್ಯವೇದವು J.V. (BSI)

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:4
8 ತಿಳಿವುಗಳ ಹೋಲಿಕೆ  

ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;


ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂವಿುಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾಡಿಸಿ ಬಾಯಿದೆರೆದು ಕೀಚುಗುಟ್ಟುವ ಯಾರೂ ಇರಲಿಲ್ಲ ಎಂದು ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು