Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:6 - ಕನ್ನಡ ಸತ್ಯವೇದವು J.V. (BSI)

6 ಓಹೋ, ಏಸಾವಿನ ಆಸ್ತಿಯು ಎಷ್ಟೋ ಹುಡುಕಲ್ಪಟ್ಟಿದೆ! ಅದರ ನಿಧಿನಿಕ್ಷೇಪಗಳು ಎಷ್ಟೋ ತಡಕಲ್ಪಟ್ಟಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಸಾವನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಧಿನಿಕ್ಷೇಪಗಳು ಸಂಪೂರ್ಣವಾಗಿ ಸೂರೆಯಾಗಿದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಏಸಾವಿನ ಆಸ್ತಿಪಾಸ್ತಿ ಸಂಪೂರ್ಣವಾಗಿ ಸೂರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ವೈರಿಯು ಏಸಾವಿನ ಗುಪ್ತನಿಧಿಗಾಗಿ ಹುಡುಕುವರು; ಅವರು ಎಲ್ಲವನ್ನು ಕಂಡುಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಏಸಾವಿನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಗೂಢ ನಿಕ್ಷೇಪಗಳು ಸೂರೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:6
8 ತಿಳಿವುಗಳ ಹೋಲಿಕೆ  

ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬೈಲುಮಾಡಿದ್ದೇನೆ, ಅವಿತುಕೊಳ್ಳಲಾರನು; ಅವನ ಸಂತಾನದವರೂ ಸಹೋದರರೂ ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ;


ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಅವರು ಬೆಬ್ಬರಬೀಳುವರು. ಖಡ್ಗವು ಅವರ ಅಶ್ವಗಳನ್ನೂ ರಥಗಳನ್ನೂ ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿಬಿಡುವರು, ಅವರ ಮನೆಗಳನ್ನು ಸೂರೆಮಾಡುವರು, ಅವರ ಹೆಂಡರನ್ನು ಕೆಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು