ಓಬದ್ಯ 1:7 - ಕನ್ನಡ ಸತ್ಯವೇದವು J.V. (BSI)7 ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ಅವನಿಗೆ ತಿಳಿಯುವುದೇ ಇಲ್ಲ’” ಎಂದು ಅನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ. ಅಧ್ಯಾಯವನ್ನು ನೋಡಿ |