Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:9 - ಕನ್ನಡ ಸತ್ಯವೇದವು J.V. (BSI)

9 ತೇಮಾನೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವಿನ ಪರ್ವತದೊಳಗಿಂದ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತೇಮಾನ್ ಪಟ್ಟಣವೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವನ ಪರ್ವತದೊಳಗೆ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತೇಮಾನನೇ, ನಿನ್ನ ಯುದ್ಧವೀರರು ಭಯಪಡುವರು. ಏಸಾವಿನ ಪರ್ವತದಲ್ಲಿರುವ ಪ್ರತಿಯೊಬ್ಬನು ನಾಶವಾಗುವನು. ಎಷ್ಟೋ ಮಂದಿ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:9
19 ತಿಳಿವುಗಳ ಹೋಲಿಕೆ  

ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಎಲೀಫಜನ ಮಕ್ಕಳು ಯಾರಂದರೆ - ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್,


ಹೀಗಿರಲು ಯೆಹೋವನು ಎದೋವಿುನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಆ ದಿನದಲ್ಲಿ ಶೂರರೊಳಗೆ ಧೀರನಾದವನೂ ಬೆತ್ತಲೆಯಾಗಿ ಓಡಿ ಹೋಗುವನು; ಇದು ಯೆಹೋವನ ನುಡಿ.


ಯೋಬಾಬನು ಸತ್ತ ಮೇಲೆ ತೇಮಾನೀಯರ ದೇಶದವನಾದ ಹೂಷಾಮನು ಅವನಿಗೆ ಬದಲಾಗಿ ಆಳಿದನು.


ಆಹಾ, ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ಕಳ್ಳರು ನಿನ್ನಲ್ಲಿ ನುಗ್ಗಿದರೆ, ರಾತ್ರಿವೇಳೆಯಲ್ಲಿ ಪಂಜುಗಳ್ಳರು ನಿನ್ನ ಮೇಲೆ ಬಿದ್ದರೆ ಬೇಕಾದಷ್ಟು ಮಾತ್ರ ದೋಚಿಕೊಂಡು ಹೋಗುವರಲ್ಲವೆ. (ಆಹಾ, ನೀನು ಎಷ್ಟೋ ಭಂಗಪಟ್ಟಿದ್ದೀ!) ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನು ಉಳಿಸುವದಿಲ್ಲವೋ?


ದೇವರು ತೇಮಾನಿನಿಂದ ಬರುತ್ತಾನೆ, ಸದಮಲಸ್ವಾವಿುಯು ಪಾರಾನ್ ಪರ್ವತದಿಂದ ಐತರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನು ಆವರಿಸುತ್ತಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು