ಕೀರ್ತನೆಗಳು 1:1 - ಕನ್ನಡ ಸತ್ಯವೇದವು J.V. (BSI)1 ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ, ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.