Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:1
13 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯಮಾಡದೆಯೂ ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.


ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?


ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?


ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡು


ನೀನು ವಿಮುಖನಾಗಿ ನನ್ನನ್ನು ಶತ್ರುವೆಂದೆಣಿಸಿರುವದೇಕೆ?


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವದಿಲ್ಲ.


ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು