Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:11 - ಕನ್ನಡ ಸತ್ಯವೇದವು J.V. (BSI)

11 [ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:11
13 ತಿಳಿವುಗಳ ಹೋಲಿಕೆ  

ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ಯಾಹು ನೋಡುವದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವದೇ ಇಲ್ಲ ಅನ್ನುತ್ತಾರೆ.


ದೇವರು ವಿಚಾರಿಸುವದೆಲ್ಲಿ? ಪರಾತ್ಪರನು ಚಿಂತಿಸುವದುಂಟೋ ಅಂದುಕೊಳ್ಳುತ್ತಾರೆ.


ತಾನು ಕದಲುವದೇ ಇಲ್ಲ; ತನಗೆ ವಿಪತ್ತು ಎಂದೆಂದಿಗೂ ಸಂಭವಿಸುವದಿಲ್ಲ ಅಂದುಕೊಂಡಿದ್ದಾನೆ.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ - ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು ಅಂದುಕೊಳ್ಳುತ್ತಾರೆ.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕೂತುಕೊಂಡಿದ್ದು -


ಯೆಹೋವನೇ, ನೀನಾದರೋ ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.


ಅವರು ಕೆಡುಕನ್ನು ಕಲ್ಪಿಸಿ ಒಳ್ಳೇ ಉಪಾಯವನ್ನು ಕಂಡುಕೊಂಡಿದ್ದೇವೆ ಅಂದುಕೊಳ್ಳುತ್ತಾರೆ; ಅವರ ಹೃದಯವೂ ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು